ದಕ್ಷಿಣಕನ್ನಡ

ಬಿ.ಸಿ.ರೋಡ್:- ಹಾಲಿನ ದರ ಏರಿಕೆಯನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್‌ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಪ್ರತಿಭಟನಾ ಸಭೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯೆ ಹಾಗೂ ಬಂಟ್ವಾಳ ಪುರಸಭೆಯ ಮಾಜಿ ಸದಸ್ಯೆ ಝೀನತ್ ಗೂಡಿನಬಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ರೈತರ ಹಿತಾಸಕ್ತಿಯನ್ನು ಕಾಪಾಡುವ ಜೊತೆಗೆ ಹಾಲು ಖರೀದಿಸುವ ಗ್ರಾಹಕರಿಗೂ ಹೊರೆಯಾಗದಂತೆ ಸಮತೋಲನದ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು. ಆದರೆ ಸರ್ಕಾರದ ನೀತಿಯು ಬಂಡವಾಳಶಾಹಿಗಳಿಗೆ ಲಾಭ ಒದಗಿಸಿ ಜನಸಾಮಾನ್ಯರ ಬದುಕನ್ನು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿಸುತ್ತಿದೆ ಎಂದು ಆರೋಪಿಸಿದರು.

ವಿಮ್ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷೆ ಶಹನಾಝ್ ಪ್ರಾಸ್ತಾವಿಕವಾಗಿ ಮಾತನಾಡಿ ಬೆಲೆ ಏರಿಕೆಯಿಂದ ಸಾಧಾರಣ ಕುಟುಂಬಗಳು ಎದುರಿಸುತ್ತಿರುವ ಸವಾಲುಗಳನ್ನು ಉಲ್ಲೇಖಿಸಿದರು. ಈ ಸಂದರ್ಭದಲ್ಲಿ ಹಾಲಿನ ದರ ಏರಿಕೆ ಖಂಡಿಸಿ ಹಾಗೂ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.

ಪ್ರತಿಭಟನಾ ಸಭೆಯಲ್ಲಿ ವಿಮ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝರೀನ ಉಪ್ಪಿನಂಗಡಿ, ಸಮಿತಿ ಸದಸ್ಯೆಯರಾದ ಗೌಸಿಯಾ, ಝೈಬುನ್ನಿಸಾ, ನೌರಿನ್ ಆಲಂಪಾಡಿ ಹಾಗೂ ವಿಮ್ ಪಧಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.

ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನುಸೈಬಾ ಕಲ್ಲಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *