ದಕ್ಷಿಣಕನ್ನಡ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ, 12 ವರ್ಷದ ಅಪ್ರಾಪ್ತ ಬಾಲಕನೊಬ್ಬನ ಮೇಲೆ ಆಮಿಷವೊಡ್ಡಿ ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಪ್ರಕರಣದ ಪಿರ್ಯಾದಿಯಾದ ಸಂತ್ರಸ್ಥ ಬಾಲಕನ ದೂರಿನಂತೆ, ಸದ್ರಿ ಬಾಲಕನಿಗೆ 2026 ನೇ ಸಾಲಿನ ಫೆಬ್ರವರಿ ತಿಂಗಳಿನಿಂದ ಅಗಸ್ಟ್ ತಿಂಗಳಿನ ಅವಧಿಯಲ್ಲಿ ಆರೋಪಿಗಳಾದ ಕೊಳ್ನಾಡು ಗ್ರಾಮದ ಕಾಡುಮಠ ಅಳ್ಳಿಕಂಡೆ ನಿವಾಸಿ ಜವಾದ್ (32) ತಂದೆ ಅಬ್ದುಲ್ ಖಾದರ್, ಸಾಲೆತ್ತೂರು ಕಟ್ಟೆ ಕಾಲೋನಿ ನಿವಾಸಿ ಶಹೀದ್ (32) ತಂದೆ ಹಮೀದ್ ಹಾಗೂ ಸಾಲೆತ್ತೂರು ಕಟ್ಟೆ ನಿವಾಸಿ ರಿಯಾರ್ಝ್ ಅಲಿಯಾಸ್ ಅಬ್ದುಲ್ ಗಫೂರ್ (42) ತಂದೆ ಸುಲೈಮಾನ್ ಬಂಧಿತ ಆರೋಪಿಗಳು.
ಅ.ಕ್ರ: 185/2026, 186/2026, 187/2026, 188/2026, 189/2026 ಹಾಗೂ 190/2026, ಕಲಂ: 4(2), 5(m), 6, 8 ಪೋಕ್ಸೋ ಕಾಯ್ದೆ 2012 ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.

ಘಟನೆಯ ವಿವರ: ಬಾಲಕನಿಗೆ ಆಮಿಷವೊಡ್ಡಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು 15ಕ್ಕೂ ಹೆಚ್ಚು ವ್ಯಕ್ತಿಗಳು ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ, ಬಾಲಕ ತೀವ್ರ ಅಸ್ವಸ್ಥಗೊಂಡು ಆತನ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಾಗ ಪೋಷಕರು ವಿಚಾರಿಸಿದ್ದು, ಈ ವೇಳೆ ಕೃತ್ಯ ಬೆಳಕಿಗೆ ಬಂದಿದೆ ತಕ್ಷಣ ಪೋಷಕರು ಮಕ್ಕಳ ಸಹಾಯವಾಣಿ (1098) ಸಂಪರ್ಕಿಸಿ ದೂರು ನೀಡಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ (CWC) ಅಧಿಕಾರಿಗಳು ಬಾಲಕನ ಹೇಳಿಕೆ ದಾಖಲಿಸಿಕೊಂಡು ನೀಡಿದ ನಿರ್ದೇಶನದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಸೆರೆಹಿಡಿದಿದ್ದಾರೆ, ಸಂತ್ರಸ್ತ ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.

Leave a Reply

Your email address will not be published. Required fields are marked *