
ಮಂಗಳೂರು ನಗರದ ಕೊಡಿಯಾಲ್ ಬೈಲಿನ ಉಪ ಕಾರಾಗೃಹಕ್ಕೆ ತಡರಾತ್ರಿ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ, 08-09-2026ರ ರಾತ್ರಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 82/2026, ಕಲಂ 323 ಬಿಎನ್‌ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ.

1.ರಿಫತ್ ಅಲಿ, 2.ಇಬ್ರಾಹಿಂ ಖಲೀಲ್, 3.ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, 4.ಅರ್ಷದ್, 5.ದಾವುದ್ ಫರ್ವೇಜ್, 6.ನಝರತ್ ಅಲಿ, 7.ಶಿಫಾನ್, 8.ಅಬ್ದುಲ್ ಸಾದೀಕ್, 9.ಅರ್ಫಜ್,
1 ರಿಂದ 4 ನೇ ಖೈದಿಗಳು ಇತ್ತೇಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿರುತ್ತಾರೆ, ಕ್ರ.ಸಂ 5 ರಿಂದ 8 ರವರು ಎನ್.ಡಿ.ಪಿ.ಎಸ್ ಡ್ರಗ್ ಪೆಡ್ಲೇರ್ ಆರೋಪಿಗಳಾಗಿರುತ್ತಾರೆ, ಕ್ರ.ಸಂ 9 ನೇ ಕೈದಿಯು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾದ ಕೋಕಾ ಪ್ರಕರಣದ ಆರೋಪಿಯಾಗಿರುತ್ತಾನೆ. ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತವಾಗಿ ದಾಳಿ ನಡೆಸಿ ವಿವಿಧ ಕಡೆ ತಪಾಸಣೆ ನಡೆಸಿದಾಗ, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಪೈಕಿ ಅಕ್ರಮವಾಗಿ 10 ಮೊಬೈಲ್ ಸ್ಮಾರ್ಟ್‌ಫೋನ್ ಗಳನ್ನು ಬಚ್ಚಿಟ್ಟುಕೊಂಡಿದ್ದನ್ನು ವಶಪಡಿಸಿಕೊಳ್ಳಲಾಗಿದೆ.

