ದಕ್ಷಿಣಕನ್ನಡ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೃಹತ್ “ರಕ್ತದಾನ ಶಿಬಿರ”.

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭಾರತೀಯ ರೆಡ್ ಕ್ರಾಸ್‌ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ ಸಹಯೋಗದೊಂದಿಗೆ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ರಡ್ ಕ್ರಾಸ್ ಸೆಂಟಿನರಿ ಬಿಲ್ಡಿಂಗ್ ನಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಿತು.

ಈ ವೇಳೆ ಮಾತನಾಡಿದ ಶಾಸಕರು ನರೇಂದ್ರ ಮೋದಿಯವರು ಈ ರಾಷ್ಟ್ರ ಕಂಡ ಅದ್ವಿತೀಯ ನಾಯಕ ಸಂಘದ ಪ್ರಚಾರಕರಾಗಿ ಪಕ್ಷದ ಪ್ರಮುಖರಾಗಿ ನಂತರ ಮುಖ್ಯಮಂತ್ರಿ ಪ್ರಧಾನಮಂತ್ರಿಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ 25 ವರ್ಷಗಳನ್ನು ಪೂರೈಸಿ ಎಲ್ಲರಿಗೂ ಮಾದರಿಯಾಗಿದ್ದಾರೆ ಅದರ ಭಾಗವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ನಿತಿನ್ ನಬಿನ್ ರವರ ಸೂಚನೆಯ ಮೇರೆಗೆ ಎಲ್ಲೆಡೆ ಸೇವಾಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಮಂಡಲದ ಮಹಿಳಾ ಮೋರ್ಚಾ ವತಿಯಿಂದಲೂ ಹಲವು ಕಾರ್ಯಕ್ರಮಗಳು ನಡೆದಿವೆ ರಕ್ತದಾನವು ಅತೀ ಅಮೂಲ್ಯವಾಗಿದ್ದು ನವರಾತ್ರಿ ಹಬ್ಬವನ್ನು ಈ ಮೂಲಕ ಆರಂಭ ಮಾಡಿರುವ ಯುವ ಮೋರ್ಚಾ ತಂಡಕ್ಕೆ ಅಭಿನಂದನೆಗಳು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಪ್ರಮುಖರಾದ ಮೋನಪ್ಪ ಭಂಡಾರಿ, ಜಯಕುಮಾರ್, ರಾಜ್ ಗೋಪಾಲ್ ರೈ, ಋತ್ವಿಕ್ ಕದ್ರಿ, ಮೌನಿಶ್ ಚೌಟ, ನಿತಿನ್ ಕುಮಾರ್, ವರುಣ್ ಅಂಬಟ್, ಭಾರತೀಯ ರೆಡ್ ಕ್ರಾಸ್ ಸೊಸೈಟಿ ದ.ಕ ಚೇರ್ಮನ್ ಶಾಂತಾರಾಮ್ ಶೆಟ್ಟಿ, ಪ್ರಮುಖರಾದ ಹರೀಶ್ ರೈ, ದಯಾನಂದ ಶೆಟ್ಟಿ, ರಾಘವೇಂದ್ರ ರಾವ್, ಸೇರಿದಂತೆ ಜಿಲ್ಲೆಯ, ಮಂಡಲದ ವಿವಿಧ ಪದಾಧಿಕಾರಿಗಳು, ನಿಕಟಪೂರ್ವ ಪಾಲಿಕೆ ಸದಸ್ಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *