

ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ, ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.
ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ. ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.


ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಈ ರೀತಿ ದಬ್ಬಾಳಿಕೆ ಹಲ್ಲೆ ಮಾಡಿರುವ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು, ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.


ಸೆಂಟ್ ಆಗ್ನೆಸ್ ಕಾಲೇಜು ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಿರುವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತೇವೆ, ಹಬ್ಬದ ರಜೆಯಲ್ಲಿ ಪರೀಕ್ಷೆ ಇಟ್ಟು ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಕಾಲೇಜು ಆಡಳಿತ ಮಂಡಳಿಯ ಧೋರಣೆಯನ್ನು ವಿರೋಧಿಸಿ, ಎಬಿವಿಪಿ ನಡೆಸುತ್ತಿರುವ ಈ ನ್ಯಾಯಯುತ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ, ಕೂಡಲೇ ಕಾಲೇಜು ಅಡಳಿತ ಮಂಡಳಿ ಪರೀಕ್ಷಾ ದಿನಾಂಕವನ್ನು ಬದಲಾಯಿಸಬೇಕಾಗಿ ಆಗ್ರಹಿಸುತ್ತೇವೆ.

