ದಕ್ಷಿಣಕನ್ನಡ

ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕ ವೀಕ್ಷಿಸಿದ ಸಚಿವ ಶ್ರೀ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ.

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ಶ್ರೀ ಡಾ. ಯತೀಂದ್ರ ಸಿದ್ದರಾಮಯ್ಯರವರು ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ವಾಮಂಜೂರು ಪಚ್ಚನಾಡಿಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ತ್ಯಾಜ್ಯ ನಿರ್ವಹಣೆ, ವಿಲೇವಾರಿ ವ್ಯವಸ್ಥೆ ಹಾಗೂ ಘಟಕದ ಕಾರ್ಯನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಗರದ ಸ್ವಚ್ಛತೆ ಹಾಗೂ ಸುಸ್ಥಿರ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಾಯಿತು, ಈ ಸಂದರ್ಭದಲ್ಲಿ ನಗರ ಪಾಲಿಕೆ ಅಧಿಕಾರಿಗಳು, ಮುಖಂಡರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *