ದಕ್ಷಿಣಕನ್ನಡ

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು, ಸಚಿವರಾದ ಡಾ. ಯು. ಟಿ. ಖಾದರ್ ಫರೀದ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳೊಂದಿಗೆ ವಿಶೇಷ ಶಾಲೆಗಳ ಮುಖ್ಯಸ್ಥರ ಸಭೆ ನಡೆಸಬೇಕೆಂದು ಮನವಿ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು, ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಒಟ್ಟಾಗಿ ಮಂಗಳೂರಿನ ಕೋಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಸಭಾಭವನದ ಬಳಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಯು. ಟಿ. ಖಾದರ್ ಫರೀದ್ ಅವರನ್ನು ಭೇಟಿ ಮಾಡಿ ಆದಷ್ಟು ಶೀಘ್ರವಾಗಿ ಮುಖ್ಯಮಂತ್ರಿಗಳೊಂದಿಗೆ ವಿಶೇಷ ಶಾಲೆಗಳ ಮುಖ್ಯಸ್ಥರ ಸಭೆ ನಡೆಸಬೇಕೆಂದು ಮನವಿ ಮಾಡಿದೆವು, ಸಚಿವರು ಶೀಘ್ರವಾಗಿ ಸಭೆ ನಡೆಸುವ ಭರವಸೆ ನೀಡಿದರು.

ಕಳೆದ ಆರು ತಿಂಗಳಿನಿಂದ ವಿಶೇಷ ಶಾಲೆಗಳಿಗೆ ಅನುದಾನ ಬಂದಿಲ್ಲ ಎನ್ನುವುದನ್ನು ಅವರ ಗಮನಕ್ಕೆ ತಂದೆವು, ಈ ಬಗ್ಗೆ ಪ್ರಯತ್ನಿಸುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸನ್ಮಾನ್ಯ ಮನೀಶ್ ರವರು ಹಾಗೂ ಸನ್ಮಾನ್ಯ ಯು. ಟಿ. ಖಾದರ್ ಅವರ ಸಹಾಯಕ ಕಾರ್ಯದರ್ಶಿಯವರಾದ ಲಿಬ್ಸತ್ ಅವರನ್ನು ಕೂಡ ಭೇಟಿ ಮಾಡಲಾಯಿತು, ಎರಡೂ ಜಿಲ್ಲೆಗಳಿಂದ ಸುಮಾರು 60ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *