ದಕ್ಷಿಣಕನ್ನಡ ರಾಜ್ಯ

ಸುಳ್ಯ ತಾಲೂಕಿನ SC/ST ಸಮುದಾಯದ ಅಭಿವೃದ್ಧಿ, ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಯೋಜನೆಗಳ ಕುರಿತು ಚಿಂತನ ಮಂಥನ ಸಭೆ.

ಸಮುದಾಯದ ಸಮಗ್ರ ಅಭಿವೃದ್ಧಿ, ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯದ ಮೂಲಕ ಸಮ ಸಮಾಜ ನಿರ್ಮಿಸುವ ಸಂಕಲ್ಪ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತಾಲೂಕು ಪಂಚಾಯಿತಿ ಕಟ್ಟಡದಲ್ಲಿರುವ AVSS ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿ ಕುರಿತು ಪೂರ್ವಭಾವಿ ಚಿಂತನ ಮಂಥನ ಸಭೆಯನ್ನು ಆಯೋಜಿಸಲಾಯಿತು.
ಸುಳ್ಯ ತಾಲೂಕಿನ SC/ST ಸಮುದಾಯದ ಅಭಿವೃದ್ಧಿ, ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಶಿಕ್ಷಣ, ಉದ್ಯೋಗ, ಆರ್ಥಿಕ ಸಬಲೀಕರಣ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಯೋಜನೆಗಳ ಕುರಿತು ಚರ್ಚಿಸುವ ಉದ್ದೇಶದಿಂದ ಈ ಸಭೆಯನ್ನು ನಡೆಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಅವರು ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಲಿಕೆ ಸಮುದಾಯದ ಹಿರಿಯರಾದ ಶ್ರೀ ಬಾಬು ಅಜಿಲ ಅವರು ದೀಪ ಬೆಳಗಿಸುವ ಮೂಲಕ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು AVSS ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಕರುಣಾಕರ ಪಲ್ಲತಡ್ಕ ಅವರು ವಹಿಸಿದ್ದರು.

ಸಭೆಯಲ್ಲಿ ಸುಳ್ಯ ತಾಲೂಕಿನ SC/ST ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಗಣ್ಯರು ತಮ್ಮ ವಿಚಾರಗಳನ್ನು ಹಂಚಿಕೊಂಡರು.
ಮಾನ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮುದಾಯದ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಿಸಿದ ವಿಚಾರಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಶ್ರೀ ಮೋಹನಂಗಯ್ಯ ಸ್ವಾಮಿ, ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು, ಅವರು ಮಾತನಾಡಿ ಸಮುದಾಯದ ಅಭಿವೃದ್ಧಿ ಹಾಗೂ ಪ್ರಗತಿಗಾಗಿ ಕೈಗೊಳ್ಳಬಹುದಾದ ಕಾರ್ಯಗಳ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಯುವರಾಜ್ ಎಂ. ಕೆ., ಅಧ್ಯಕ್ಷರು, MRPL SC/ST Employees Welfare Association, ಅವರು ಮಾತನಾಡಿ SC/ST ಸಮುದಾಯದ ಮುಂದಿನ ಗುರಿಗಳು, ಅಭಿವೃದ್ಧಿ ಕಾರ್ಯಯೋಜನೆಗಳು ಹಾಗೂ ಸಮುದಾಯದ ಸರ್ವತೋಮುಖ ಪ್ರಗತಿಗೆ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ವಿವರಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಸಮಾನ ಅವಕಾಶ, ಸಹಬಾಳ್ವೆ, ಪರಸ್ಪರ ಗೌರವ ಮತ್ತು ಸಾಮಾಜಿಕ ನ್ಯಾಯವನ್ನು ಆಧರಿಸಿದ ಸಮ ಸಮಾಜವನ್ನು ನಿರ್ಮಿಸಬೇಕೆಂದು ಅವರು ಕರೆ ನೀಡಿದರು.
ಇದಲ್ಲದೆ, ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಮುಖಂಡರು ಮತ್ತು ಸಮುದಾಯದ ಸದಸ್ಯರು ಒಟ್ಟಾಗಿ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿಹೇಳಲಾಯಿತು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು, ಅಧ್ಯಕ್ಷರು ಮೋಹನಂಗಯ್ಯ ಸ್ವಾಮಿ,
MRPL SC/ST Employees Welfare Association ಅಧ್ಯಕ್ಷರು ಯುವರಾಜ್ ಎಂ. ಕೆ., MRPL SC/ST Employees Welfare Association ಉಪಾಧ್ಯಕ್ಷರು ರಾಜೇಶ್ ವೈ, AVSS ಸುಳ್ಯ, ಅಧ್ಯಕ್ಷರು ಕರುಣಾಕರ ಪಲ್ಲತಡ್ಕ, AVSS ಸುಳ್ಯ, ಉಪಾಧ್ಯಕ್ಷರು ಚೋಮ ಗಾಂಧಿನಗರ,
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಶಂಕರ್ ಪೆರಾಜೆ, ಸಾಮಾಜಿಕ ಹೋರಾಟಗಾರರು ನಂದರಾಜ್ ಸಂಕೇಶ, ನಲಿಕೆ ಸಮುದಾಯದ ಹಿರಿಯರು ಬಾಬು ಅಜಿಲ, SC/ST ಸಮುದಾಯದ ಮುಖಂಡರು ಸತೀಶ್ ಬೂಡುಮಕ್ಕಿ, ಪಿಟ್ನೆಸ್ ಜಿಮ್, ಸುಳ್ಯ ಹರೀಶ್ ಕೊಡಿಯಾಲಬೈಲು, ಸಮುದಾಯದ ಮುಖಂಡರು ಪರಮೇಶ್ವರ ಕೆಂಬಾರೆ, ಸೀತಾನಂದ ಬೇರ್ಪಡ್ಕ, ಹರೀಶ್ ಗುತ್ತಿಗಾರು, ವಿಠಲ ಪುತ್ತೂರು, ಮಹೇಶ್ ಬೆಳ್ಳಾಲ್ಕರ್, ಪುಟ್ಟಣ್ಣ ವಳಿಕಜೆ, ಶಿವರಾಮ ಕನಕಮಜಲು, ಸುಳ್ಯ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಶ್ರೀ ಪ್ರಕಾಶ್ ಪಿ. ಎಸ್. ಪಾತೆಟ್ಟಿ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಚಿಂತನ ಮಂಥನ ಸಭೆಯು ಸುಳ್ಯ ತಾಲೂಕಿನ SC/ST ಸಮುದಾಯದ ಸಮಸ್ಯೆಗಳನ್ನು ಗುರುತಿಸುವುದು, ಅಭಿವೃದ್ಧಿಯ ಅಗತ್ಯತೆಗಳನ್ನು ಚರ್ಚಿಸುವುದು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕಾರ್ಯಯೋಜನೆಗಳಿಗೆ ದಿಕ್ಕು ರೂಪಿಸುವ ಉದ್ದೇಶವನ್ನು ಹೊಂದಿತ್ತು.
ಸಮುದಾಯದ ಅಭಿವೃದ್ಧಿಗಾಗಿ ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ಆರ್ಥಿಕ ಸಬಲೀಕರಣ, ಸರ್ಕಾರಿ ಯೋಜನೆಗಳ ಸಮರ್ಪಕ ಬಳಕೆ ಮತ್ತು ಸಾಮಾಜಿಕ ನ್ಯಾಯದಂತಹ ಕ್ಷೇತ್ರಗಳಿಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ ಎಂಬ ಆಶಯವನ್ನು ಸಭೆ ಮುಂದಿಟ್ಟಿತು.
ಸಮುದಾಯದ ಎಲ್ಲ ಮುಖಂಡರು, ಸಂಘಟನೆಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ಸಾಧ್ಯ ಎಂಬ ಸಂದೇಶವನ್ನು ಈ ಸಭೆ ಸಾರಿತು.

ನಮ್ಮ ಗುರಿ ಕೇವಲ ಸಮುದಾಯದ ಅಭಿವೃದ್ಧಿಯಲ್ಲ, ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮೂಲಕ ಸಮ ಸಮಾಜವನ್ನು ನಿರ್ಮಿಸುವುದಾಗಿದೆ.
ಸುಳ್ಯ ತಾಲೂಕಿನ SC/ST ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಇಂತಹ ಚಿಂತನ ಮಂಥನ ಸಭೆಗಳು ಮುಂದುವರಿಯಲಿ. ಸಮುದಾಯದ ಹಕ್ಕುಗಳ ರಕ್ಷಣೆ, ಅಭಿವೃದ್ಧಿಯ ಅವಕಾಶಗಳ ಸೃಷ್ಟಿ ಮತ್ತು ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸೋಣ.
ಒಗ್ಗಟ್ಟೇ ನಮ್ಮ ಶಕ್ತಿ – ಅಭಿವೃದ್ಧಿಯೇ ನಮ್ಮ ಗುರಿ – ಸಮ ಸಮಾಜವೇ ನಮ್ಮ ಸಂಕಲ್ಪ.

Leave a Reply

Your email address will not be published. Required fields are marked *