ದಕ್ಷಿಣಕನ್ನಡ

ಮಂಗಳೂರಿನ ಹೃದಯಭಾಗದಲ್ಲಿ ಸಾರ್ವಜನಿಕರಿಗಾಗಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಸ್ಥಳ ಪರಿಶೀಲನೆ…

ಮಂಗಳೂರು ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಉದ್ಯಾನವನಗಳ ಅಗತ್ಯವಿದ್ದು ಈ ಉದ್ಯಾನವನದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಮಂಗಳೂರಿನ ಹೃದಯಭಾಗದಲ್ಲಿ ಉದ್ಯಾನವನ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಶೇಷ ಆಸಕ್ತಿ ವಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನ ನಿರ್ಮಿಸಲು ಸೂಕ್ತ ಸ್ಥಳವನ್ನು ಗುರುತಿಸುವ ಉದ್ದೇಶದಿಂದ ಮುಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಮಣ್ಣಗುಡ್ಡೆಯಲ್ಲಿರುವ ಸೇವಕ್ ಗಾರ್ಡನ್ ಹಾಗೂ ಮಹಾಕಾಳಿ ಪಡ್ಪು ಬಳಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳೂರು ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಹುಲ್ ರತ್ನಮ್ ಪಾಂಡೆ, ಮುಡಾ ಆಯುಕ್ತರಾದ ಶ್ರೀ ಮೊಹಮ್ಮದ್ ನಜೀರ್ ಸೇರಿದಂತೆ ನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಉಪಸ್ಥಿತರಿದ್ದು ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗೆ ಸೂಕ್ತವಾದ ಸ್ಥಳಗಳ ಕುರಿತು ಪರಿಶೀಲನೆ ನಡೆಸಿದರು.

ಮಂಗಳೂರಿನ ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ವಿಶ್ರಾಂತಿ, ವಾಯುವಿಹಾರ ಹಾಗೂ ಮನರಂಜನೆಗೆ ಅನುಕೂಲವಾಗುವ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಮೂಲಕ ನಗರದ ಜನರಿಗೆ ಉತ್ತಮ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಸ್ಥಳ ಪರಿಶೀಲನೆ ಮಹತ್ವ ಪಡೆದಿದೆ.

Leave a Reply

Your email address will not be published. Required fields are marked *