ದಕ್ಷಿಣಕನ್ನಡ

ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್‌ನ ಕೊಡುಗೆ ನೂತನ ಬಸ್ ತಂಗುದಾಣ ಉದ್ಘಾಟನೆ.

ಮಂಗಳೂರಿನ ಕಪಿತಾನಿಯೊದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೂತನವಾಗಿ ನಿರ್ಮಿಸಲಾದ “ರೋಹನ್ ಸ್ಕ್ವೇರ್ಬಸ್ ತಂಗುದಾಣ”ವನ್ನು ಉದ್ಘಾಟಿಸಲಾಯಿತು. ನಗರದ ನಾಗರಿಕ ಮೂಲಸೌಕರ್ಯವನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ.
ಶಾಸಕ ವೇದವ್ಯಾಸ ಕಾಮತ್ ರವರು ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೆರೊ, ನಿರ್ದೇಶಕರಾದ ಶ್ರೀ ಡಿಯೋನ್ ಮೊಂತೆರೊ, ಕಾರ್ಪೊರೇಟರ್ ಶ್ರೀ ಸಂದೀಪ್ ಗರೋಡಿ, ರೋಹನ್ ಕಾರ್ಪೊರೇಶನ್ ನ ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ, ಶ್ರೀ ಜೇಮ್ಸ್ ಸೇರಿದಂತೆ ಇತರ ಗಣ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾಡುವ ಕೆಲಸವೇ ನಿಜವಾದ ಸೇವೆ. ಆ ನಿಟ್ಟಿನಲ್ಲಿ ಸಾರ್ವಜನಿಕರ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗುವಂತೆ ರೋಹನ್ ಕಾರ್ಪೊರೇಶನ್ ಕೈಗೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ. ಮಂಗಳೂರಿನ ಜನರಿಗೆ ಉಪಯುಕ್ತವಾಗುವ ಇಂತಹ ಕಾರ್ಯಗಳು ಇನ್ನಷ್ಟು ನಡೆಯಲಿ ಎಂದು ಆಶಿಸುತ್ತೇನೆ.ಎಂದು ಹೇಳಿದರು.
ಕಾರ್ಪೊರೇಟರ್ ಸಂದೀಪ್ ಗರೋಡಿ ಅವರು ಮಾತನಾಡಿ ಮಂಗಳೂರಿನ ಬೆಳವಣಿಗೆಯಲ್ಲಿ ರೋಹನ್ ಕಾರ್ಪೊರೇಶನ್ ನ ಕೊಡುಗೆ ಗಮನಾರ್ಹವಾಗಿದೆ. ತಮ್ಮ ಯೋಜನೆಗಳ ಜೊತೆಗೆ ನಗರದ ಜನಜೀವನಕ್ಕೂ ಉಪಯೋಗವಾಗುವ ಕೆಲಸಗಳಿಗೆ ಆದ್ಯತೆ ನೀಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹ, ಈ ರೀತಿಯ ಜನಪರ ಕಾರ್ಯಗಳು ಮುಂದಿನ ದಿನಗಳಲ್ಲಿಯೂ ಇನ್ನಷ್ಟು ನಡೆಯಲಿ, ಮಂಗಳೂರಿನ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡಲಿ.ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಡಾ. ರೋಹನ್ ಮೊಂತೆರೊ ಅವರು ಮಾತನಾಡಿ ಮಂಗಳೂರಿನೊಂದಿಗೆ ನಿಕಟವಾಗಿ ಬೆಸೆದು ಕೊಂಡಿರುವ ಸಂಸ್ಥೆಯಾಗಿ, ನಮ್ಮ ಜವಾಬ್ದಾರಿ ನಮ್ಮಯೋಜನೆಗಳಿಗಷ್ಟೇಸೀಮಿತವಾಗಿಲ್ಲ ಎಂದು ನಾವು ನಂಬುತ್ತೇವೆ, ಸಾರ್ವಜನಿಕರ ದೈನಂದಿನ ಬದುಕಿಗೆ ಅನುಕೂಲವಾಗುವಂತಹ ಕಾರ್ಯಗಳ ಮೂಲಕ ನಗರಕ್ಕೆ ಕೊಡುಗೆ ನೀಡುವುದು ನಮ್ಮ ಬದ್ಧತೆಯಭಾಗವಾಗಿದೆ,ಈ ಬಸ್ ತಂಗುದಾಣವು ಆನಿಟ್ಟಿನಲ್ಲಿ ನಮ್ಮ ಒಂದು ಅರ್ಥಪೂರ್ಣ ಹೆಜ್ಜೆಯಾಗಿದೆ ಎಂದು ಹೇಳಿದರು.
ಸೌಜನ್ಯ ಹೆಗ್ಡೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *