ದಕ್ಷಿಣಕನ್ನಡ

“ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 20 ಅಂಶದ ಕಾರ್ಯಕ್ರಮ”ಗಳನ್ನು ಜಾರಿಗೆ ತರುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ.

ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿಕೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ ಮಾತನಾಡಿ ಇಂದಿರಾ ಗಾಂಧಿ ಅವರು ದೇಶದ ಸಾಮಾಜಿಕ ಸಾಮರಸ್ಯ ಉಳಿವಿಗಾಗಿ ಮತೀಯ ರಾಜಕೀಯ ಶಕ್ತಿಗಳ ವಿರುದ್ಧ ಹೋರಾಡಿದರು. ಸಾಮಾಜಿಕ ನ್ಯಾಯದಿಂದ ವಂಚಿತರಾದ ಬಡವರು, ಶೋಷಿತರು, ದಮನಿತರಿಗೆ ಧ್ವನಿಯಾಗಿದ್ದರು. ಇಂದಿನ ಯಾವುದೇ ಸರ್ಕಾರಗಳು ಜಾರಿಗೆ ತರುವ ಜನಪರ ಯೋಜನೆಗಳಲ್ಲಿ ಇಂಧಿರಾ ಗಾಂಧಿ ಅವರ 20 ಅಂಶದ ಕಾರ್ಯಕ್ರಮ ಅಡಕವಾಗಿದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂಧಿರಾ ಗಾಂಧಿಯವರ ಜನಪರ ಕಾರ್ಯಕ್ರಮಗಳ ಹೆಸರು ಬದಲಾವಣೆ ಮಾಡಿರುವುದೇ ಅವರ ಸಾಧನೆ ಎಂದರು.

ಇಂದಿರಾ ಗಾಂಧಿ ಅವರು ಗರೀಬಿ ಹಠಾವೊ, ಪಡಿತರ ಚೀಟಿ ಯೋಜನೆ, ಅಂಗನವಾಡಿ, ಹಸಿರು ಕ್ರಾಂತಿ, ಶ್ವೇತ ಕ್ರಾಂತಿ, ನೀಲ ಕ್ರಾಂತಿ, ಜಾತಿ ಪದ್ಧತಿ ನಿರ್ಮೂಲನೆ, ಬ್ಯಾಂಕುಗಳ ರಾಷ್ಟ್ರೀಕರಣ ಜಾರಿಗೊಳಿಸಿ ದೇಶದ ಆರ್ಥಿಕ ವೃದ್ಧಿಗೆ ಶಕ್ತಿ ತುಂಬಿದರು ಸಾಲ ಮನ್ನ ಜಾರಿಗೆ ತಂದು ಜನ ಸಾಮಾನ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕಾರಣರಾದರು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಜ ಜೆ.ಆರ್.ಲೋಬೊ, ಮೇಯರ್ ಶಶಿಧರ್ ಹೆಗ್ಡೆ, ಡಿಸಿಸಿ ಉಪಾಧ್ಯಕ್ಷರಾದ ಅಬೂಬಕ್ಕರ್ ಕುದ್ರೋಳಿ, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ, ಡೆನ್ನಿಸ್ ಡಿಸಿಲ್ವ, ಶಂಸುದ್ದೀನ್ ಕುದ್ರೋಳಿ, ಅಶೋಕ್ ಡಿ.ಕೆ, ಜೋಕಿಂ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *