ದಕ್ಷಿಣಕನ್ನಡ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಕಾರ್ಯಕಾರಿಣಿ ಸಭೆ ಮತ್ತು ಬಿ.ಎಲ್.ಎ-2ಗಳ ಕಾರ್ಯಾಗಾರ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಕಾರ್ಯಕಾರಿಣಿ ಸಭೆ ಮತ್ತು ಬಿ.ಎಲ್.ಎ-2ಗಳ ಕಾರ್ಯಾಗಾರವು ನಗರದ ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ನಡೆಸಿದ ಸಂಘಟಿತ ಹೋರಾಟದಿಂದ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡುವಂತಾಗಿದೆ. ಮೊದಲ ಹಂತದ ಎಸ್ಐಆರ್ ನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ ಬಿಎಲ್ಎ-2 ಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದನೆಗಳು. ಮುಂದಿನ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕಾದ ಕಾರ್ಯಗಳು, ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದೆ ನಡೆಯಲಿರುವ ಹೋರಾಟಗಳು, ಪುತ್ತೂರು ಚಲೋ ಹಾಗೂ ಬಳ್ಳಾರಿ ಚಲೋ ಸಹಿತ ಅನೇಕ ವಿಷಯಗಳಲ್ಲಿಯೂ ಜೊತೆಯಾಗೋಣ ಎಂದು ಕರೆ ನೀಡಿದರು.ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಪೂರ್ಣಿಮಾ ಹಾಗೂ ಸುಜಿತ್ ಪ್ರತಾಪ್, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಹಿರಿಯರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಸೇರಿದಂತೆ ಮಂಡಲದ ಪದಾಧಿಕಾರಿಗಳು, ನಿಕಟಪೂರ್ವ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು, ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *