ದಕ್ಷಿಣಕನ್ನಡ

ಹಿಂದೂ ಅಂಗಡಿ ಮಾಲೀಕರ ಮೇಲೆ ಹಲ್ಲೆಯನ್ನು ಖಂಡಿಸಿ ಮತ್ತು ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸದೆ ಇರುವ ಪೋಲಿಸರ ಧೋರಣೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ಚಲೋ ಕಾರ್ಯಕ್ರಮ.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ
ಪುತ್ತೂರಿನ ದರ್ಬೆ ಸಮೀಪ ಜೆರಾಕ್ಸ್ ಆಂಗಡಿಯಲ್ಲಿ ನಡೆದ ಹಿಂದೂ ಅಂಗಡಿ ಮಾಲೀಕರ ಮೇಲೆ ಹಲ್ಲೆಯನ್ನು ಖಂಡಿಸಿ ಮತ್ತು ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸದೆ ಇರುವ ಪೋಲಿಸರ ಧೋರಣೆಯನ್ನು ಖಂಡಿಸಿ ಪುತ್ತೂರು ಚಲೋ ಕಾರ್ಯಕ್ರಮ ನಡೆಯಿತು.
ದರ್ಬೆ ಸಮೀಪದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಮುಖ್ಯರಸ್ತೆಯಾಗಿ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮುಂಭಾಗದ ಜಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಹಿಂದು ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ,ಬಜರಂಗದಳ ವಿಭಾಗ ಸಂಯೋಜಕರಾದ ಪುನೀತ್ ಅತ್ತಾವರ, ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಯೋಜಕರಾದ ಮೋಹನದಾಸ ಕಾಣಿಯೂರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪ್ವೆಲ್ ,ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ , ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ಉಲ್ಲಾಸ್ ಕೆ.ಟಿ,ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಭುಜಂಗ ಕುಲಾಲ್ ,ವಿಶ್ವ ಹಿಂದೂ ಪರಿಷದ್ ಪ್ರಾಂತ ಪ್ರಚಾರ ಪ್ರಸಾರ ಪ್ರಮುಖರಾದ ಪ್ರದೀಪ್ ಸರಿಪಲ್ಲ ,ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿ ಶಿವಾನಂದ ಮೆಂಡನ್, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ,ಪ್ರಶಾಂತ್ ಬಂಟ್ವಾಳ, ವಿಧಾನಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಬೊಟ್ಯಾಡಿ,ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ.ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಜಾ,ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *