ದಕ್ಷಿಣಕನ್ನಡ

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ; ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್‌

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದ್ದು, ನದಿ ಪ್ರವಾಸೋದ್ಯಮ, ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಪ್ರವಾಸೋದ್ಯಮ, ವಾಟರ್‌ ಸ್ಪೋರ್ಟ್ಸ್‌ ಹಾಗೂ ಸ್ಥಳೀಯ ಸಮುದಾಯ ಆಧಾರಿತ ಪ್ರವಾಸೋದ್ಯಮವನ್ನು ಪರಸ್ಪರ ಜೋಡಿಸುವ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್‌ ತಿಳಿಸಿದರು .

  • ನೇತ್ರಾವತಿ ನದಿಯಲ್ಲಿ ರಿವರ್‌ ಕ್ರೂಸ್‌, ಹೌಸ್‌ಬೋಟ್‌ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ
  • ಮಂಗಳೂರು–ಗೋವಾ ಕರಾವಳಿ ವಲಯದಲ್ಲಿ ಕ್ರೂಸ್‌ ಪ್ರವಾಸೋದ್ಯಮ ವಿಸ್ತರಣೆಗೆ ಅಗತ್ಯ ಮೂಲಸೌಕರ್ಯ
  • ಮೀನುಗಾರರು ಮತ್ತು ಕರಾವಳಿ ಸಮುದಾಯಗಳ ಜೀವನೋಪಾಯವನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಲು ಒತ್ತು
  • ತಣ್ಣೀರುಬಾವಿ ಬ್ಲೂ ಫ್ಲ್ಯಾಗ್‌ ಬೀಚ್‌ ಸೇರಿದಂತೆ ಕರಾವಳಿ ತಾಣಗಳಲ್ಲಿ ಗುಣಮಟ್ಟದ ಮೂಲಸೌಕರ್ಯ
  • CRZ ಅಡೆತಡೆ ಪರಿಹಾರಕ್ಕೆ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ
  • ಕರಾವಳಿ ಪ್ರವಾಸೋದ್ಯಮದಲ್ಲಿ ಕ್ಯಾಸಿನೋಗಳಿಗೆ ಅವಕಾಶವಿಲ್ಲ: ಸಚಿವರ ಸ್ಪಷ್ಟನೆ

ಕರಾವಳಿ–ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿದ್ಧಪಡಿಸಿರುವ ಪ್ರತ್ಯೇಕ ನೀತಿಯಡಿ ರಿವರ್‌ ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಮತ್ತು ಕರಾವಳಿ ಪ್ರವಾಸೋದ್ಯಮ ಯೋಜನೆಗಳನ್ನು ಹೆಚ್ಚು ಸಮಾವೇಶಾತ್ಮಕ ದೃಷ್ಟಿಕೋನದಲ್ಲಿ ಜಾರಿಗೆ ತರಲಾಗುವುದು. ವಿಶೇಷವಾಗಿ ಮೀನುಗಾರರು ಮತ್ತು ಕರಾವಳಿ ಸಮುದಾಯಗಳ ಜೀವನೋಪಾಯವನ್ನು ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ನೇರವಾಗಿ ಜೋಡಿಸುವುದು ಪ್ರಮುಖ ಉದ್ದೇಶವಾಗಿದೆ. ಸ್ಥಳೀಯರಿಗೆ ಉದ್ಯೋಗ, ಆದಾಯ ಮತ್ತು ಸಣ್ಣ ಉದ್ಯಮಾವಕಾಶಗಳನ್ನು ಸೃಷ್ಟಿಸುವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲಾಗುವುದು. ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ, ಸುರಕ್ಷತೆ ಮತ್ತು ಉತ್ತಮ ಅನುಭವವನ್ನು ಖಚಿತಪಡಿಸುತ್ತಲೇ ಪರಿಸರದ ಸಂರಕ್ಷಣೆಗೆ ಆದ್ಯತೆ ನೀಡಲಾಗುವುದು.

ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್‌ ಬೀಚ್‌, ಕರಾವಳಿ ಪ್ರದೇಶಗಳು ಹಾಗೂ ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

Leave a Reply

Your email address will not be published. Required fields are marked *