
ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲದ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ದೇರಳಕಟ್ಟೆಯ ಸೇವಾ ಆಶ್ರಮದಲ್ಲಿ ಹಿರಿಯ ನಾಗರಿಕರೊಂದಿಗೆ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವನ್ನು ಸೇವಾ ಮನೋಭಾವದೊಂದಿಗೆ ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸೇವಾ ಆಶ್ರಮದ ಹಿರಿಯರಿಗೆ ಮೋರ್ಚಾದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಶ್ರೀ ಜಗದೀಶ್ ಆಳ್ವ ಕುವೆತ್ತಬೈಲ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷರಾದ ಟಿ.ಎ. ಶಾನವಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಕೆ. ಜಮಾಲ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಮಾಧ್ಯಮ ವಕ್ತಾರ ಹೇಮಂತ್ ಶೆಟ್ಟಿ ಬೆಲ್ಮ, ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷರಾದ ಸುಮನ ಹರೀಶ್, ರೈತ ಮೋರ್ಚಾ ಕ್ಷೇತ್ರಾಧ್ಯಕ್ಷ ಪದ್ಮನಾಭ ಗಟ್ಟಿ, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಕಾರ್ಯಕಾರಿ ಸದಸ್ಯ ಸಿರಾಜ್ ಮುಡಿಪು, ಕ್ಷೇತ್ರದ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಕೆ.ಎಚ್., ಮೋರ್ಚಾ ಉಪಾಧ್ಯಕ್ಷರಾದ ಅಬ್ಬು ನಡುಪದವು ಹಾಗೂ ರಹಮತ್ ಅಲಿ ಕಿನ್ಯಾ, ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ನಿಕಟಪೂರ್ವ ಅಧ್ಯಕ್ಷ ಕೆರೀಂ ಉಚ್ಚಿಲ್, ಸೇವಾ ಆಶ್ರಮದ ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಆರಂಭದಲ್ಲಿ ಮಹಮ್ಮದ್ ಅಸ್ಗರ್ ಮುಡಿಪು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಕ್ಷೇತ್ರಾಧ್ಯಕ್ಷ ಸಿದ್ದೀಕ್ ತಲಪಾಡಿ ಧನ್ಯವಾದ ಅರ್ಪಿಸಿದರು, ಸೇವೆಯೇ ಸಂಘಟನೆಯ ಮೂಲ ಆಶಯವಾಗಿದ್ದು, ಸಮಾಜದ ಹಿರಿಯರನ್ನು ಗೌರವಿಸುವ ಹಾಗೂ ಅವರೊಂದಿಗೆ ಸಂತೋಷ ಹಂಚಿಕೊಳ್ಳುವ ಮೂಲಕ ಪ್ರಧಾನಮಂತ್ರಿಯವರ ಜನ್ಮದಿನವನ್ನು ಸೇವಾ ಸಂಕಲ್ಪದೊಂದಿಗೆ ಆಚರಿಸಲಾಯಿತು.

